Published
6 months agoon
By
Akkare News
ಪುತ್ತೂರು: ಸೆ.12 : ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಕ ಕಾಂಗ್ರೆಸ್ ವತಿಯಿಂದ “ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ಜನಜಾಗೃತಿ” ನಾಳೆ ದಿನಾಂಕ ಸಪ್ಟಂಬರ್ 13ರಂದು ದರ್ಬೆ ಜಂಕ್ಷನ್ ನಿಂದ ಪುತ್ತೂರು ಗಾಂಧಿ ಕಟ್ಟೆಯ ವರೆಗೆ ಬೃಹತ್ ಪಂಜಿನ ಮೆರವಣಿಗೆ ನಡೆಯಲಿದೆ.


ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಯುವ ಕಾಂಗ್ರೆಸ್ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.












