Connect with us

ರಾಜಕೀಯ

ಹೊಸದಾಗಿ ಜಾತಿಗಣತಿ; 1ಲಕ್ಷ 75 ಸಾವಿರ ಶಿಕ್ಷಕರ ನೇಮಕ: ಶಿಕ್ಷಕರಿಗೆ 20,000 ಗೌರವಧನ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಬೆಂಗಳೂರು, ಸೆಪ್ಟೆಂಬರ್‌ 12: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ ಎಂದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement