Published
6 months agoon
By
Akkare News
ನವದೆಹಲಿ, ಸೆಪ್ಟೆಂಬರ್ 12: ಪ್ರಧಾನಿ ನರೇಂದ್ರ ಮೋದಿ ಇಂದು ಹಸ್ತಪ್ರತಿಗಳ ಡಿಜಿಟಲೀಕರಣ, ಸಂರಕ್ಷಣೆ ಮತ್ತು ಸಾರ್ವಜನಿಕ ಪ್ರವೇಶವನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ನಿಟ್ಟಿನಲ್ಲಿ ಆರಂಭಿಸಲಾದ ಡಿಜಿಟಲ್ ವೇದಿಕೆಯಾದ ಜ್ಞಾನ ಭಾರತಂ ಪೋರ್ಟಲ್ ಅನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಕೇಂದ್ರ ಸಂಸ್ಕೃತಿ ಸಚಿವಾಲಯವು ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದರ್ಶನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು.
ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕೂಡ ಜೊತೆಗಿದ್ದರು. ಗುರುವಾರ ಪ್ರಾರಂಭವಾದ ಮೂರು ದಿನಗಳ ಈ ಸಮ್ಮೇಳನವು ‘ಹಸ್ತಪ್ರತಿ ಪರಂಪರೆಯ ಮೂಲಕ ಭಾರತದ ಜ್ಞಾನ ಪರಂಪರೆಯನ್ನು ಮರಳಿ ಪಡೆಯುವುದು’ ಎಂಬ ವಿಷಯದೊಂದಿಗೆ ಪ್ರಮುಖ ವಿದ್ವಾಂಸರು, ಸಂರಕ್ಷಣಾವಾದಿಗಳು, ತಂತ್ರಜ್ಞರು ಮತ್ತು ನೀತಿ ನಿರೂಪಕರನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿದೆ.