Connect with us

ಅಪಘಾತ

ಗಣೇಶ ವಿಸರ್ಜನೆ ವೇಳೆ ಕ್ಯಾಂಟರ್‌ ಹರಿದು9 ಸಾವು; ಹಾಸನ ದುರಂತಕ್ಕೆ ಯತ್ನಾಳ್‌ ಕಂಬನಿ, ಪರಿಹಾರ ಘೋಷಿಸಿದ ಸಿದ್ದರಾಮಯ್ಯ!

Published

on

ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಭೀಕರ ಲಾರಿ ಅಪಘಾತಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಈ ಅಪಘಾತದಲ್ಲಿ 9 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂ, ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನ: ಇಲ್ಲಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಯಾಂಟರ್‌ ಹರಿದು9 ಜನರು ಸಾವನ್ನಪ್ಪಿದ್ದಾರೆ. ಈ ಭೀಕರ ಘಟನೆ ಹಾಸನ ಜಿಲ್ಲೆಯ ಜನತೆಯ ಗಣೇಶ ಹಬ್ಬದ ಸಂಭ್ರಮವನ್ನು ಕಸಿದುಕೊಂಡಿದೆ. ವಿಜೃಂಭಣೆಯಿಂದ ಗಣೇಶನನ್ನು ಕಳುಹಿಸಿಕೊಡಲು ಸಜ್ಜಾಗಿದ್ದ ಜಿಲ್ಲಯೆ ಜನತೆ, ಈಗ ದು:ಖದ ಮಡುವಿನಲ್ಲಿದ್ದಾರೆ. ಮೊಸಳೆ ಹೊಸಹಳ್ಳಿ ದುರಂತ ನಾಡಿನ ಜನರನ್ನು ತೀವ್ರ ದು:ಖತಪ್ತವಾಗಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version