Connect with us

ಇತರ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರ – ಇಂದು ಹೈಕೋರ್ಟ್‌ನಲ್ಲಿ ಮೂರು ಅರ್ಜಿಗಳ ವಿಚಾರಣೆ

Published

on

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್‌ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು  ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪಸಿಂಹ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ ನಡೆಸಲಿದೆ.

ಈ ಬಗ್ಗೆ ಮಾಜಿ  ಪ್ರತಾಪಸಿಂಹ, ಬೆಂಗಳೂರು ನಿವಾಸಿಗಳಾದ ಎಚ್‌.ಎಸ್‌.ಗಿರೀಶ್‌, ಉದ್ಯಮಿ ಟಿ.ಗಿರೀಶ್‌ ಕುಮಾರ್‌ ಹಾಗೂ ಅಭಿನವ ಭಾರತ್‌ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್‌.ಸೌಮ್ಯಾ ಅವರು ಸಲ್ಲಿಸಿರುವ ಪ್ರತ್ಯೇಕ 3 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ| ವಿಭು ಬಖುÅ ಹಾಗೂ ನ್ಯಾ| ಸಿ.ಎಂ.ಜೋಷಿ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಪಟ್ಟಿಯಾಗಿದೆ.

ನಾಡಹಬ್ಬ ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ, ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಹಾಗಿರುವಾಗ ಹಿಂದೂ ಅಲ್ಲದ ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದನ್ನು ಹಿಂಪಡೆಯುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement