Connect with us

ಇತ್ತೀಚಿನ ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರೆಸ್ ಕ್ಲಬ್ ಆರಂಭಿಸಲು ಕೊಠಡಿ ನೀಡಿ-ಡಿಸಿ ಗೆ ಪತ್ರಕರ್ತರಿಂದ ಮನವಿ

Published

on

ಪತ್ರಕರ್ತರಿಗೆ ನಿವೇಶನ ಹಾಗೂ ತಾಲೂಕು ಪತ್ರಕರ್ತರ ಸಂಘಗಳಿಗೆ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣ ಮಾಡಲು ಕಂದಾಯ ಭೂಮಿ ಒದಗಿಸುವಂತೆ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರೆಸ್ ಕ್ಲಬ್ ಆರಂಭಿಸಲು ಕೊಠಡಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯರನ್ನು ಭೇಟಿ ಮಾಡಿ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಿದೆ.

ಪತ್ರಕರ್ತರ ಎಲ್ಲ ಮನವಿಗಳಿಗೆ ಜಿಲ್ಲಾಧಿಕಾರಿ ದರ್ಶನ್ ಕೆ ವಿ ಅವರು ಪೂರಕವಾಗಿ ಸ್ಪಂದಿಸಿದರು. ಶೀಘ್ರವೇ ತಹಶೀಲ್ದಾರ್ ಸಭೆ ನಡೆಯಲಿದ್ದು, ಅಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಫದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಿ. ಆಚಾರ್ಯ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ಮೂಲ್ಕಿ ತಾಲೂಕು ಪತ್ರಕರ್ತರ ಸಂಫದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಳಿಂಜೆ,ಕಡಬ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಪ್ರವೀಣ್ ರಾಜ್, ಪ್ರಕಾಶ್ ಕೋಡಿಂಬಾಳ ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version