Connect with us

ಇತರ

ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೊಲೀಸರು

Published

on

ಉಜಿರೆ: ಎಸ್ಐಟಿ ಶೋಧ ನಡೆಸಿದ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆಯ ತಿಮರೋಡಿ ಮನೆಗೆ ಮಹಜರು ನಡೆಸಲು ಹೋದಾಗ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ.

ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೆ.19ರಂದು ಬೆಳಗ್ಗೆ 6ಕ್ಕೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಯಲ್ಲಿ ಯಾರೂ ಇರಲಿಲ್ಲ. ಈ ಹಿನ್ನೆಲೆ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಅಂಟಿಸಿ ಬಂದಿದ್ದಾರೆ.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version