Connect with us

ಸ್ಥಳೀಯ

ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ- ಮುಖ್ಯಮಂತ್ರಿ ಸಿದ್ಧರಾಮಯ್ಯ

Published

on

ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.


ಇಂದು ಗದಗದ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಹೇಳಿದ್ದಾರೆ.
ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದಿದ್ದಾರೆ. ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ. ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದು ತಿಳಿಸಿದ್ದಾರೆ.
ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement