Connect with us

ಹವಾಮಾನ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ.27ರಿಂದ ಮಳೆ ಜೋರು

Published

on

ಸೆಪ್ಟೆಂಬರ್ 24: ಕರ್ನಾಟಕದಲ್ಲಿ ಸೆಪ್ಟೆಂಬರ್ 27ರಿಂದ ಮಳೆಮತ್ತೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗ, ಧಾರವಾಡ, ಬೆಳಗಾವಿಯಲ್ಲಿ ಕೂಡ ಮಳೆಯಾಗಲಿದೆ.
ಆಗುಂಬೆ, ಇಂಡಿ, ಔರಾದ್, ಧರ್ಮಸ್ಥಳ, ಮಂಠಾಳ, ಹುಮ್ನಾಬಾದ್, ಝಲ್ಕಿ, ಬೀದರ್, ದೇವರಹಿಪ್ಪರಗಿ, ಇಳಕಲ್, ಕಮ್ಮರಡಿ, ಕುಮಟಾ, ಸಿಂಧನೂರು, ಉಡುಪಿ, ಬಿಳಗಿ, ಜೇವರಗಿ, ಕೋಟಾ, ಕೊಟ್ಟಿಗೆಹಾರ, ಮೂಡುಬಿದಿರೆ, ನೆಲೋಗಿ, ಶೋರಾಪುರ, ಸಿದ್ದಾಪುರ, ಬಸವನಬಾಗೇವಾಡಿ, ಭಾಗಮಂಡಲ, ಗಂಗಾವತಿ, ಗೇರುಸೊಪ್ಪ, ಗೋಕರ್ಣ, ಕೆಆರ್ ನಗರ, ಕಕ್ಕೇರಿ, ಹುಣಸಗಿ, ಗೇರುಸೊಪ್ಪ, ಜಯಪುರ, ಕೊಪ್ಪ, ಕಳಸ, ಸಿಂದಗಿ, ಎನ್​ಆರ್​ಪುರ, ಪುತ್ತೂರು, ಶೃಂಗೇರಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು,ಅಲ್ಲಲ್ಲಿ ತುಂತುರು ಮಳೆಯಾಗಿದೆ. ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ನಲ್ಲಿ29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version