Connect with us

ಅಪಘಾತ

ಯಲ್ಲಾಪುರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು

Published

on

ಯಲ್ಲಾಪುರ ತಾಲೂಕಿನ ಇಂಡಿಯನ್ ಪೆಟ್ರೋಲ್ ಪಂಪ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಜೊಯಿಡಾ ತಾಲ್ಲೂಕಿನ ಕೊಡ್ತಳ್ಳಿ ಗ್ರಾಮದ ಚಂದ್ರಶೇಖರ್ ಸೋಮಗೌಡ (37) ಎಂದು ಗುರುತಿಸಲಾಗಿದೆ.

ಕಾರವಾರದಿಂದ ಸಿಂದನೂರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಯಲ್ಲಾಪುರ ತಲುಪಿದಾಗ ಎದುರಿನಿಂದ ಬಂದ ಬೈಕ್ ಸವಾರ ಕಾರೊಂದನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಘಟನೆಯಲ್ಲಿ ಬೈಕ್ ಸವಾರ ಚಂದ್ರಶೇಖರ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version