Published
10 months agoon
By
Akkare News
ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದಿನಿಂದ ಭಾರಿ ಮಳೆ, ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಮಳೆ ಆರ್ಭಟ ಹೆಚ್ಚಾಗಲಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಕರ್ನಾಟಕದಾದ್ಯಂತ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಚಂಡಮಾರುತ
ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ. ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದ ಗಾಳಿ ಮತ್ತು ಮಳೆ ಮುಂದುವರಿಯಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈ ಭಾಗದಲ್ಲಿ ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ವರುಣನ ಆರ್ಭಟ ಕೊಂಚ ಕಡಿಮೆಯಾಗಲಿದ್ದು, ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ಹವಾಮಾನ ಮುಂದುವರಿಯಲಿದೆ.


