Published
5 months agoon
By
Akkare News
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿ ಆಲಿಸಿದ ನ್ಯಾಯಪೀಠ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.
ಸುಮಾರು 32 ಪ್ರಕರಣದ ಕೇಸ್‌ಗಳನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶದ ಪ್ರಕಾರ, ಪೊಲೀಸರು ಅಥವಾ ನ್ಯಾಯಾಲಯದ ಸೂಚನೆಗಳು ಅಗತ್ಯವಿದ್ದಾಗ ಮಾತ್ರ ತಿಮರೋಡಿ ಈ ಜಿಲ್ಲೆಯನ್ನು ಪ್ರವೇಶಿಸಬಹುದು ಎಂದು ತಿಳಿಸಲಾಗಿತ್ತು. ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ವಿವಿಧ ಅಡೆತಡೆಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದರು.