Published
5 months agoon
By
Akkare News
ಸುಳ್ಯ, : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಮನೆಯೊಂದಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆ ಮನೆಯ ನಾಯಿ ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದೆ. ಪರಿಣಾಮ ಶಿಕ್ಷಕಿಯ ಬಟ್ಟೆ ಹರಿದುಹೋಗಿದೆ.






