Published
5 months agoon
By
Akkare News
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.
ಬಿಎ ಎಲ್.ಎಲ್.ಬಿ ಪದವೀಧರರಾಗಿರುವ ಯು.ಟಿ.ಖಾದರ್ ಮಾಜಿ ಶಾಸಕ ದಿವಂಗತ ಯು.ಟಿ.ಫರೀದ್ ಅವರ ಪುತ್ರ. ಎನ್.ಎಸ್.ಯು.ಐ, ಯುವ ಕಾಂಗ್ರೆಸ್ ಹಾಗೂ ಸೇವಾದಳಗಳ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ ಯು.ಟಿ.ಖಾದರ್ ಈಗ ಮಂಗಳೂರು ಕ್ಷೇತ್ರ ಎಂದಾಗಿರುವ ಉಳ್ಳಾಲ ವಿಧಾನಸಭಾ ಕ್ಷೇತ್ರವನ್ನು ಸತತ ಐದು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ.