Published
5 months agoon
By
Akkare News
ಮಹಿಳೆಯರ ಆರೋಗ್ಯ ಮತ್ತು ಕಾರ್ಯಕ್ಷಮತೆಯ ದೃಷ್ಟಿಯಿಂದ “ಋತುಚಕ್ರ ರಜೆ” (Karnataka menstrual leave) ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಚರ್ಚೆ ನಡೆಸುತ್ತಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ.
ಸರ್ಕಾರಿ, ಖಾಸಗಿ ಕಂಪನಿ ಸೇರಿದಂತೆ ಉದ್ಯೋಗ ಮಾಡುತ್ತಿರುವ ಎಲ್ಲಾ ಮಹಿಳೆಯರಿಗೆ ಋತು ಚಕ್ರ ರಜೆ ನೀಡಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗುವುದು. ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿಗಳು, ಐಟಿ ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ನಿಯಮವನ್ನು ಅನುಷ್ಠಾನಗೊಳಿಸುವ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವ ನಿರೀಕ್ಷೆ ಇದೆ.
ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ನೀಡುವ ಸಂಬಂಧ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ನಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿ ಶಿಫಾರಸು ಮಾಡಿತ್ತು. ಮುಟ್ಟಿನ ಅವಧಿಯಲ್ಲಿ ಮಹಿಳೆಯರು ಹೇಗೆ ವಿವಿಧ ಶಾರೀರಿಕ ಬದಲಾವಣೆಗಳಿಗೆ ಒಳಗಾಗುತ್ತಾರೆ. ಉದ್ಯೋಗಸ್ಥ ಮಹಿಳೆಯರು ಅನುಭವಿಸುವ ಸಂಕಷ್ಟ, ಸವಾಲುಗಳು, ಕೆಲಸ ಮಾಡುವ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಅನುಸರಿಸಬೇಕಾದ ನಿಯಮಗಳು, ವಿಶ್ರಾಂತಿಯ ಅಗತ್ಯತೆ ಕುರಿತು ಸಮಿತಿಯ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ವರದಿ ಆಧಾರದ ಮೇಲೆ ರಜೆ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ಹೇಳಿವೆ.