Connect with us

ಇತರ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

Published

on

ಮಂಗಳೂರು: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.

ನ್ಯಾಯಾಲಯವು ಭರತ್ ಕುಮ್ಡೇಲು ಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

2025ರ ಮೇ 27ರಂದು ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಬಳಿಕ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ.

ಅಶ್ರಫ್ ಕಲಾಯಿ ಕೊಲೆ ಪ್ರಕರಣ ಸಂಬಂಧ ಕೂಡ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದೆ.

ಈತನ ವಿರುದ್ಧ ಬಂಟ್ವಾಳ ನಗರ ಠಾಣೆ, ಬಂಟ್ವಾಳ ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ನಗರ ಠಾಣೆ ಸಹಿತ 15 ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.


 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version