Published
5 months agoon
By
Akkare News
ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ.
ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ ೧೧.೫೫ಕ್ಕೆ ಹೊರಟು ಮರುದಿನ ಅಂದರೆ ಅ.೧೮ ರಂದು ಬೆಳಗ್ಗೆ ೧೧.೧೫ಕ್ಕೆ ಮಂಗಳೂರಿನ ಮಂಗಳೂರು ಜಂಕ್ಷನ್ ತಲುಪಲಿದೆ.ಅದೇ ದಿನ ರೈಲು ಸಂಖ್ಯೆ ೦೭೩೫೪ ಮಂಗಳೂರು ಜಂಕ್ಷನ್-ಯಶವಂತಪುರ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ ೨.೩೫ಕ್ಕೆ ಹೊರಟು ರಾತ್ರಿ ೧೧.೨೫ಕ್ಕೆ ಯಶವಂತಪುರ ಜಂಕ್ಷನ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್ ಹಾಗೂ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ನಡುವೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಕುಣಿಗಲ್, ಯಶವಂತಪುರ ಜಂಕ್ಷನ್, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ,ಶ್ರೀ ಮಹಾದೇವಪ್ಪ ಮಲ್ಲಾರ ಹಾವೇರಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಜೊತೆಗೆ ಅ. ೧೯ ರಂದು ರೈಲು ಸಂಖ್ಯೆ ೦೬೨೨೯ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು ರಾತ್ರಿ ೧೨.೧೫ಕ್ಕೆ ಹೊರಟು ಅದೇ ದಿನ ಬೆಳಗ್ಗೆ ೧೧.೧೫ಕ್ಕೆ ಮಂಗಳೂರಿನ ಮಂಗಳೂರು ಜಂಕ್ಷನ್ ತಲುಪಲಿದೆ. ಅದೇ ದಿನ ರೈಲು ಸಂಖ್ಯೆ ೦೬೨೩೦ ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ ೨.೩೫ಕ್ಕೆ ಹೊರಟು ರಾತ್ರಿ ೧೨.೩೦ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.