Connect with us

ಸ್ಥಳೀಯ

ಮುಜರಾಯಿ ದೇವಾಲಯಗಳಲ್ಲಿ ನಾಳೆ ಗೋ ಪೂಜೆಗೆ ಆದೇಶ : ಸಚಿವ ರಾಮಲಿಂಗಾರೆಡ್ಡಿ ಸೂಚನೆ ಮೇರೆಗೆ ಆದೇಶ

Published

on

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನವಾದ ನಾಳೆ( ಅಕ್ಟೋಬರ್ 22, 2025) ಗೋಪೂಜೆ ನಡೆಸಲು ಆದೇಶ ಹೊರಡಿಸಲಾಗಿದೆ. ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಮೌಖಿಕ ಸೂಚನೆ ಮೇರೆಗೆ ಮುಜರಾಯಿ ಇಲಾಖೆಯ ಆಯುಕ್ತರು ಗೋಪೂಜೆಗೆ ಆದೇಶ ಹೊರಡಿಸಿದ್ದಾರೆ.


ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಮುಜರಾಯಿ ಇಲಾಖೆ ಸೂಚನೆ ನೀಡಿದೆ.  ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋಪೂಜೆ ಕಾರ್ಯಕ್ರಮ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ. ಹಿಂದೂ ಧರ್ಮದಲ್ಲಿ ಗೋವಿಗೆ ಗೋಮಾತೆ ಎಂಬ ಹೆಸರಿನಿಂದ, ವಿಶೇಷ ಸ್ಥಾನಮಾನವನ್ನು ನೀಡಿ ಪೂಜಿಸಲಾಗುತ್ತಿದೆ .   ಈ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ, ಜನ ಜಾಗೃತಿ ಮೂಡಿಸಬೇಕಾಗಿದೆ.

ಆದ್ದರಿಂದ ದೀಪಾವಳಿ (ಬಲಿಪಾಡ್ಯಮಿ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ ಕುಂಕುಮ ಹೂವುಗಳಿಂದ ಅಲಂಕರಿಸಿ,  ಅಕ್ಕಿ, ಬೆಲ್ಲ ಹಣ್ಣು ಮುಂತಾದ ಗೋಗ್ರಾಸವನ್ನು ನೀಡಿ ಸಂಜೆ ಗೋಪೂಜೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚನೆ ನೀಡಲಾಗಿದೆ. 

ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರ ಮೌಖಿಕ ಸೂಚನೆ ಮೇರೆಗೆ ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆಗೆ ಆದೇಶ ಹೊರಡಿಸುತ್ತಿರುವುದಾಗಿ  ಮುಜರಾಯಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. 

Continue Reading
Click to comment

Leave a Reply

Your email address will not be published. Required fields are marked *

Advertisement