Published
5 months agoon
By
Akkare News
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಗುರುವಾರದಿಂದ (ಅ.23) ಉತ್ತಮ ಮಳೆಯಾಗಲಿದೆ. ಕೆಲವೆಡೆ ರಭಸದ ಮಳೆಯ ಜತೆಗೆ ವೇಗದ ಗಾಳಿಯೂ ಬೀಸಲಿದೆ. ಅ.28ರವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ 1 ವಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.
ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ