Connect with us

ಅಪಘಾತ

ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್​ಗೆ ಬೆಂಕಿ.. 20 ಪ್ರಯಾಣಿಕರು ಸಜೀವ ದಹನ

Published

on

ಅಮರಾವತಿ: ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್​ ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್​ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್​​ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್​ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ‌ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್​ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version