Published
5 months agoon
By
Akkare News
ಅಮರಾವತಿ: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂಧ್ರ ಪ್ರದೇಶದ ಕರ್ನೂಲ್ ಚಿನ್ನಟೆಕೋರು ಗ್ರಾಮದ ಬಳಿ ಖಾಸಗಿ ಕಾವೇರಿ ಸ್ವೀಪರ್ ಬಸ್ ಹೈದರಾಬಾದ್ನಿಂದ ಬೆಂಗಳೂರಿಗೆ ಬರುತಿತ್ತು. ಈ ವೇಳೆ ಏಕಾಏಕಿ ಬಸ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗ ಹೊತ್ತಿ ಉರಿದಿದೆ. ಇದರಿಂದ ಪ್ರಯಾಣಿಕರು ತಕ್ಷಣಕ್ಕೆ ಹೊರ ಬರಲು ಆಗಿಲ್ಲ. ಬಸ್ನಲ್ಲಿದ್ದ 42 ಪ್ರಯಾಣಿಕರ ಪೈಕಿ 20ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಇದರಲ್ಲಿ 15ಕ್ಕೂ ಅಧಿಕ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿದ್ದರಿಂದ ಪ್ರಯಾಣಿಕರು ಹೊರಬರಲು ಹರಸಾಹಸ ಪಟ್ಟಿದ್ದಾರೆ. ಕೆಲವರು ಎಮರ್ಜೆನ್ಸಿ ಡೋರ್ನಿಂದ ಹೊರ ಬಂದರೆ, ಇನ್ನು ಕೆಲವರು ಕಿಟಕಿಯ ಗ್ಲಾಸ್ ಒಡೆದು ಹೊರ ಬಂದಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್ಪಿ ವಿಕ್ರಾಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.




