Connect with us

ಸ್ಥಳೀಯ

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯಸೇವಾ ಯೋಜನೆ,ರೋಟರಿ ಕ್ಲಬ್ಉಪ್ಪಿನಂಗಡಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

Published

on

ಪುತ್ತೂರು: ಉಪ್ಪಿನಂಗಡಿಯಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಅಂಡ್ ರೇಂಜರ್ಸ್, ದೈಹಿಕ ಶಿಕ್ಷಣ ವಿಭಾಗ, ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಕಸ್ತೂರ ಬಾ ಮೆಡಿಕಲ್ ಕಾಲೇಜು, ಅತ್ತಾವರ ಮಂಗಳೂರು. ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾಯಕ್ರಮವನ್ನು ಉದ್ಘಾಟಿಸಿದ ಡಾ. ರಾಜರಾಮ್ ಕೆ.ಬಿ. ಸದಸ್ಯರು, ಕಾಲೇಜು ಅಬಿವೃದ್ಧಿ ಸಮಿತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿ ಮತ್ತು ಅಸಿಸ್ಟೆಂಟ್ ಗೌವರ್ನರ್ ವಲಯ-೪ ರೋಟರಿ ಜಿಲ್ಲೆ 3181 ಇವರು ತಮ್ಮ ಉದ್ಘಾಟನಾ ಭಾಷಣದಲ್ಲಿ ರಕ್ತ ಅತ್ಯಮೂಲ್ಯವಾಗಿದ್ದು ನಾವು ತುರ್ತು ಸಂದಭದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಎಷ್ಟೋ ಜನದ ಪ್ರಾಣವನ್ನು ಉಳಿಸಬಹುದಾಗಿದೆ ಎಂದು ತಿಳಿಸಿದರು.

.

ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಪ್ರಾಂಶುಪಾಲರಾದ ಶ್ರೀ ರವಿರಾಜ. ಎಸ್ರವರು ಮಾತನಾಡಿ ರಕ್ತದಾನ ಎಂಬುದು ಮಹಾದಾನ, ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡುವುದರಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಾದ್ಯವಾಗುತ್ತದೆ. ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀಯುತ ಚಂದ್ರಹಾಸ ಶೆಟ್ಟಿ, ಕಸ್ತೂರಬಾ ಮೆಡಿಕಲ್ ಕಾಲೇಜಿನ ವೈಧ್ಯಾಧಿಕಾರಿ ಡಾ.ವೃಂದ, ಎನ್.ಎಸ್.ಎಸ್ ಅಧಿಕಾರಿ ಕೇಶವಕುಮಾರ್ .ಬಿ ಯುವ ರೆಡ್ ಕ್ರಾಸ್ ಘಟಕದ ಸಹ ಸಂಚಾಲಕರಾದ ಶ್ರೀ ಮಹೇಶ.ಜಿ, ಶ್ರೀ ಕೃಷ್ಣ .ಡಿ, ರೋವರ್ಸ್ ರೇಂಜರ್ಸ್ ಘಟಕದ ಮಹೇಶ್ ಕುಮಾರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಶ್ರೀ ಪ್ರವೀಣ್ ಕುಮಾರ್ ಇವರು ಕಾಯಕ್ರಮದಲ್ಲಿ ಉಪಸ್ಥಿತರಿದ್ದರು. .ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಡಾ. ದೇವರಾಜ. ಆರ್ ಸ್ವಾಗತಿಸಿದರು, ವಿದ್ಯಾರ್ಥಿನಿ ಕುಮಾರಿ ಅಶ್ವಿನಿಯವರು ನಿರೂಪಣೆ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement