Published
4 months agoon
By
Akkare News
ನೆಲಮಂಗಲ: ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ ರಾಮಚಂದ್ರಯ್ಯ ಎಂದು ತಿಳಿದು ಬಂದಿದೆ.
ಕಳೆದ ಮೂರು ತಿಂಗಳಿಂದ ಸಂಬಳ ನೀಡದೇ ಕಿರುಕುಳ ನೀಡುತ್ತಿದ್ದರು. ಜೊತೆಗೆ ಬಯೋಮೆಟ್ರಿಕ್ ಹಾಜರಾತಿ ಹಾಕದೇ, ಇಲ್ಲಸಲ್ಲದ ಕಾರಣ ಹೇಳಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ರಾಮಚಂದ್ರಯ್ಯ ಅವರು ವಿಷ ಸೇವನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತುಮಕೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪಿಡಿಓ ಗೀತಾಮಣಿ ವಿರುದ್ದ ಪ್ರಕರಣ ದಾಖಲಾಗಿದೆ.