Connect with us

ಇತರ

ಪುನೀತ್ ಪುಣ್ಯಸ್ಮರಣೆ – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Published

on

ರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್  ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಶಿವರಾಜಕುಮಾರ್‌ ರಾಘಣ್ಣ ದಂಪತಿ, ಯುವ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಆಗಮಿಸಿ, ಪೂಜೆಗೆ ಸಿದ್ಧತೆ ಮಾಡಿಕೊಂಡು ಬಳಿಕ ಅಪ್ಪುಗೆ ಇಷ್ಟವಾದ ತಿನಿಸುಗಳನ್ನಿಟ್ಟು ಪೂಜೆ ನೆರವೇರಿಸಿದ್ದಾರೆ

ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸಿದ್ದು, ಅಪ್ಪು ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಪೂಜೆ ವೇಳೆ ಅಭಿಮಾನಿಗಳು ಅಪ್ಪು ಅಪ್ಪು ಅಂತಾ ಜೈಕಾರ ಹಾಕುತ್ತಿದ್ದು, ಕೈಯಲ್ಲಿ ರೋಸ್ ಹಿಡಿದು ಆಗಮಿಸುತ್ತಿದ್ದಾರೆ. ಇನ್ನೂ ಯುವ ರಾಜ್‌ಕುಮಾರ್‌ನ್ನು ನೋಡಿ ಜೂ.ಪವರ್ ಸ್ಟಾರ್‌ಗೆ ಎಂದು ಜೈ ಎಂದು ಜೈಕಾರ ಹಾಕುತ್ತಿದ್ದಾರೆ. ಈ ವರ್ಷ ವಿಶೇಷ ಅಂದ್ರೆ ಅಪ್ಪು ಅವರ ಫ್ಯಾನ್ ಡಮ್ ಆ್ಯಪ್ ಲಾಂಚ್ ಆಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement