Connect with us

ಇತರ

ಪ್ರೀತಿ ಮಾಡುವಂತೆ ತಾಕಿತ್ತು… ಶಿಕ್ಷಕಿಯಿಂದ ನಿರಾಕರಣೆ…ಆರೋಪಿಯಿಂದ ಹಲ್ಲೆ….!! ಬಂಧನ…!!

Published

on

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42) ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ಸಂಬಂಧಿಕನೇ ಆಗಿರುವ ಭವಿತ್ (28) ಎಂದು ತಿಳಿದು ಬಂದಿದೆ.

ಪ್ರೇಮ ವೈಫಲ್ಯವೇ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ.

ಭವಿತ್ ಶಿಕ್ಷಕಿ ಅಪೂರ್ವರನ್ನು ಪ್ರೀತಿಸುತ್ತಿದ್ದು ಅಪೂರ್ವ ಪ್ರೀತಿಯನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಭವಿತ್ ಮಂಗಳವಾರ ಸಂಜೆ ಅಪೂರ್ವ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಾರಿಮಧ್ಯೆ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಅಪೂರ್ವರನ್ನು ಅಡಿಕೆ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ಅವರು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎಂದು ತಿಳಿದು ಬಂದಿದೆ.

ಸ್ಥಳೀಯರು ಗಮನಿಸಿ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹಲ್ಲೆ ಬಳಿಕ ಆರೋಪಿ ನಾಪತ್ತೆಯಾಗಿದ್ದು, ಬುಧವಾರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು‌ ಮಾಹಿತಿ ನೀಡಿದ್ದಾರೆ.

ಈ‌ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement