Connect with us

ನಿಧನ

ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ : ವ್ಯಕ್ತಿ ಮೃತ್ಯು

Published

on

ಪುತ್ತೂರು: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಅಳಿಕೆಯಲ್ಲಿ ನಡೆದಿದೆ.

 

ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಮೃತ ವ್ಯಕ್ತಿ.

ಇಸ್ಮಾಯಿಲ್ ಕಬ್ಬಿಣದ ದೋಟಿ ಬಳಸಿ ತೆಂಗಿನ ಮರದಿಂದ ತೆಂಗಿನಕಾಯಿ ಕೀಳುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ಸ್ಪರ್ಶಿಸಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement