Published
4 months agoon
By
Akkare News
ಪುತ್ತೂರು,ಕರ್ನಾಟಕ ಸರಕಾರ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕೊಡಲ್ಪಡುವ 2018-19 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತ್ಯುತ್ತಮ ಗೀತ ರಚನೆಗಾಗಿ ಪುತ್ತೂರಿನ ಯುವ ಸಾಹಿತಿ ರಜಾಕ್ ಪುತ್ತೂರು ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಇಂದು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪೆನ್ಸಿಲ್ ಬಾಕ್ಸ್ ಚಿತ್ರದ ನಿರ್ಮಾಪಕರಾದ ದಯಾನಂದ ರೈ, ಯುವ ನಿರ್ದೇಶಕರಾದ ಕೀರ್ತನ್, ಲೇಖಕರು, ನಿವೃತ್ತ ಪ್ರಾಧ್ಯಾಪಕರಾದಶ್ರೀಮತಿ ಉಷಾ ವಿ ಭಟ್ ಹಾಗೂ ಶ್ರೀ ವಿಷ್ಣು ಭಟ್, ರೋಟರಿ ಉಪ್ಪಿನಂಗಡಿ ಇದರ ಅಧ್ಯಕ್ಷರಾಗಿರುವ ಕೆನ್ಯೂಟ್ ಮಸ್ಕರೇನ್ಹಸ್ ಉಪಸ್ಥಿತರಿದ್ದರು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ಅಭಿನಂದನಾ ನುಡಿಗಳನ್ನಾಡಿದರು.


ಯುವ ಸಾಹಿತಿ ರಜಾಕ್ ಪುತ್ತೂರು ಇವರನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಘಟಿಕೋತ್ಸವ ಭವನ ಮೈಸೂರು ವಿಶ್ವವಿದ್ಯಾನಿಲಯ ಇಲ್ಲಿ ಇಂದು ಸಂಜೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಉತ್ತಮ ನಟ ಪ್ರಶಸ್ತಿಗೆ ಕನ್ನಡದ ಖ್ಯಾತ ನಟರಾದ ಕಿಚ್ಚ ಸುದೀಪ್ ಹಾಗೂ ಉತ್ತಮ ಕಥೆಗಾಗಿ ಸಾಹಿತಿಗಳಾದ ಶ್ರೀ ಜಯಂತ್ ಕಾಯ್ಕಿಣಿ ಮುಂತಾದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.





