Published
10 months agoon
By
Akkare News
ಚಿಕ್ಕಮಂಗಳೂರು:ನವೆಂಬರ್ 06: ಪೊಲೀಸರು ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿತ್ತು.
ಈ ವೇಳೆ ಆರೋಪಿಗಳು ಎಸ್ಕೇಪ್ ಆಗಲು ಬಳಸಿದ್ದ ಕಾರನ್ನು ಸೀಜ್ ಮಾಡಲಾಗಿತ್ತು. ಆದರೆ, ಈಗ ನ್ಯಾಯಾಲಯ ಕಾರನ್ನ ರಿಲೀಸ್ ಮಾಡುವಂತೆ ಆದೇಶಿಸಿದೆ. ಈ ಹಿನ್ನಲೆ ಕಾರನ್ನು ಪರಿಶೀಲಿಸುವಾಗ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ.



ಕಾರಿನ ಸೀಟ್ನಡಿ ಚಿನ್ನ, ಬೆಳ್ಳಿ ಪತ್ತೆ
ಪರಿಶೀಲನೆ ವೇಳೆ ಕಾರಿನ ಸೀಟ್ ಅಡಿಯಲ್ಲಿ 595 ಗ್ರಾಂ ಚಿನ್ನ, 589 ಗ್ರಾಂ ಬೆಳ್ಳಿ, 3,41,150 ರೂ. ಹಣ ಪತ್ತೆಯಾಗಿದೆ. ವಶಕ್ಕೆ ಪಡೆಯಲಾದ ಹಣ ಮತ್ತು ವಸ್ತುಗಳ ಮೌಲ್ಯ ಕೋಟಿಗೂ ಅಧಿಕ ಎನ್ನಲಾಗಿದ್ದು, ಕಳ್ಳತನವಾಗಿದ್ದ ಮೌಲ್ಯಕ್ಕಿಂದ ಅಧಿಕ ಚಿನ್ನ ಮತ್ತು ಬೆಳ್ಳಿ ಈ ವೇಳೆ ಪತ್ತೆಯಾಗಿದೆ. ಹೀಗಾಗಿ ಗ್ಯಾಂಗ್ ಇನ್ನೂ ಹಲವೆಡೆ ಕೈಚಳಕ ತೋರಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
ಆಗಸ್ಟ್ನಲ್ಲಿ ನಡೆದಿದ್ದ ಕಳ್ಳತನ






