Published
4 months agoon
By
Akkare News
ಉಪ್ಪಿನಂಗಡಿ:ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸಹಪಾಠಿ ಹಿಂದೂ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ಅನ್ಯ ಕೋಮಿನ ವಿದ್ಯಾರ್ಥಿಗಳಿಗೆ ಅವರದೇ ಕೋಮಿಗೆ ಸೇರಿದ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಗುರುವಾರದಂದು ನಡೆದಿದೆ.
ಉಪ್ಪಿನಂಗಡಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ಪೆರಿಯಡ್ಕ ಮೂಲದ ವಿದ್ಯಾರ್ಥಿಯೋರ್ವನ ಕಾಲು, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಂದರ್ಭ ಪ್ರಾಕ್ಟರ್ ಆಗಿತ್ತು .


ಇದರಿಂದಾಗಿ ಆತ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಹಿನ್ನೆಲೆಯಲ್ಲಿ 10 ಮಂದಿ ಸಹಪಾಠಿಗಳು ಆತನ ಆರೋಗ್ಯ ವಿಚಾರಿಸಲೆಂದು ನ.೬ರಂದು ಮಧ್ಯಾಹ್ನ ಮನೆಗೆ ತೆರಳಿದ್ದರು.ಈ ವಿದ್ಯಾರ್ಥಿಗಳಲ್ಲಿ ಇಬ್ಬರು ಒಂದು ಧರ್ಮಕ್ಕೆ ಸೇರಿದವರಾಗಿದ್ದರೆ,ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಉಪ್ಪಿನಂಗಡಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ಪೆರಿಯಡ್ಕ ಮೂಲದ ವಿದ್ಯಾರ್ಥಿಯೋರ್ವನ ಕಾಲು, ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಂದರ್ಭ ಪ್ರಾಕ್ಟರ್ ಆಗಿತ್ತು.ಇದರಿಂದಾಗಿ ಆತ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಹಿನ್ನೆಲೆಯಲ್ಲಿ 10 ಮಂದಿ ಸಹಪಾಠಿಗಳು ಆತನ ಆರೋಗ್ಯ ವಿಚಾರಿಸಲೆಂದು ನ.೬ರಂದು ಮಧ್ಯಾಹ್ನ ಮನೆಗೆ ತೆರಳಿದ್ದರು.
ಈ ವಿದ್ಯಾರ್ಥಿಗಳಲ್ಲಿ ಇಬ್ಬರು ಒಂದು ಧರ್ಮಕ್ಕೆ ಸೇರಿದವರಾಗಿದ್ದರೆ,ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ವಿದ್ಯಾರ್ಥಿನಿಯರು ಇನ್ನೊಂದು ಧರ್ಮಕ್ಕೆ ಸೇರಿದವರಾಗಿದ್ದರು.
ಈ ವಿದ್ಯಾರ್ಥಿಗಳು ಆತನ ಮನೆಯಿಂದ ವಾಪಸಾಗುತ್ತಿದ್ದಾಗ ಅನ್ಯಕೋಮಿನ ಯುವಕರ ಗುಂಪೊಂದು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಈ ಪರಿಸರದಲ್ಲಿ ಬುರ್ಖಾಧಾರಿ ವಿದ್ಯಾರ್ಥಿನಿಯರೊಂದಿಗೆ ಸುತ್ತಾಡುತ್ತಿರುವುದಕ್ಕೆ ಆಕ್ಷೇಪಿಸಿ ವಿದ್ಯಾರ್ಥಿ ಶಾಲಿಮ್ ಎಂಬವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





