Connect with us

ಇತರ

ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ, ತರುಣ್ ಕೃಷ್ಣ ಜಿ ಎಸ್ ನೇರಳಕಟ್ಟೆ ರಾಜ್ಯಮಟ್ಟಕ್ಕೆ ಆಯ್ಕೆ

Published

on

ಕಲ್ಲಡ್ಕ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್ ಆಯ್ಕೆಯಾಗಿರುತ್ತಾನೆ.


ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ, ಇತ್ತೀಚೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆ ಇದರ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ಮಿನಿ ಒಲಿಂಪಿಕ್ಸ್ – 2025 ರ ಕಬಡ್ಡಿ ವಿಭಾಗದ ರಾಜ್ಯಮಟ್ಟದ ಸ್ಪರ್ಧೆಯಲ್ಲೂ ದಕ್ಷಿಣ ಕನ್ನಡ ತಂಡದ ನಾಯಕನಾಗಿ ಭಾಗವಹಿಸಿರುತ್ತಾನೆ
.ಇವನು ಬಂಟ್ವಾಳ ತಾಲೂಕಿನ ನಾರ್ಶ ಮೈದಾನ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಗೋಪಾಲಕೃಷ್ಣ ನೇರಳಕಟ್ಟೆ ಮತ್ತು ಸುರಿಬೈಲು ಪ್ರೌಢಶಾಲಾ ಶಿಕ್ಷಕಿ ಸ್ವಪ್ನ ಇವರ ಪುತ್ರನಾಗಿರುತ್ತಾನೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version