Published
10 months agoon
By
Akkare News
ಪುತ್ತೂರು ನವೆಂಬರ್ 10: ಎತ್ತಿನಹೊಳೆ ಯೋಜನೆಯ ನೀರು ಬೆಂಗಳೂರಿನ ಕೈಗಾರಿಕೆಗಳಿಗೆ ಬಳಕೆಗೆ ರಾಜ್ಯ ಸರಕಾರದ ಪ್ರಸ್ತಾಪಕ್ಕೆ ಪುತ್ತೂರು ಶಾಸಕ ಅಶೋಕ್ ರೈ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ದಕ್ಷಿಣಕನ್ನಡ ಜಿಲ್ಲೆಯಲ್ಲೂ ನಾವು ಕುಡಿಯುವ ನೀರಿಗೆ ಸಮಸ್ಯೆ ಎದುರಿಸುತ್ತಿದ್ದೇವೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ, ಮಾರ್ಚ್ ತಿಂಗಳಿನಲ್ಲೇ ಕುಡಿಯುವ ನೀರಿನ ಅಭಾವ ಎದುರಾಗುತ್ತದೆ. ಅಂತರ್ ಜಲ ಕಡಿಮೆಯಾಗಿದ್ದು, ಕೃಷಿಗೆ ಬೇಕಾದ ನೀರು ಕೂಡ ಬೋರ್ ವೆಲ್ ನಿಂದ ಸಿಗುತ್ತಾ ಇಲ್ಲ, ಹಾಗಿರುವಾಗ ಬೆಂಗಳೂರಿನ ಕೈಗಾರಿಕೆಗಳಿಗೆ ನೀರು ಪೂರೈಕೆ ಮಾಡೋದು ಎಷ್ಡು ಸರಿ, ಈ ಯೋಜನೆಗೆ ನನ್ನ ಪೂರ್ಣ ವಿರೋಧವಿದೆ ಎಂದರು.
ಎತ್ತಿನಹೊಳೆ ಯೋಜನೆಯ ನೀರನ್ನು ಕೈಗಾರಿಕೆಗಳಿಗೆ ಪೂರೈಸುವ ಮೊದಲು ಪಶ್ಚಿಮವಾಹಿನಿ ಯೋಜನೆಗೆ ಬೇಕಾದ ಅನುದಾನ ಬಿಡುಗಡೆ ಮಾಡಿ, ಜಿಲ್ಲೆಯಲ್ಲಿ ಹರಿಯುವ ನದಿಗಳಿಗೆ ಅಣೆಕಟ್ಟುಗಳನ್ನು ಕಟ್ಟಿ ನೀರು ಸಂಗ್ರಹಿಸುವ ಯೋಜನೆಗೆ ಅನುದಾನ ಕೊಟ್ಟು ಬಳಿಕ , ಬೆಂಗಳೂರಿನ ಕೈಗಾರಿಕೆಗಳಿಗೆ ಎತ್ತಿನಹೊಳೆ ನೀರು ಕೋಡುವ ಬಗ್ಗೆ ಯೋಚನೆ ಮಾಡಿ. ಇಲ್ಲದಿದ್ದರೆ ಯೋಜನೆಗೆ ವಿರೋದ ವ್ಯಕ್ತಪಡಿಸಬೇಕಾಗುತ್ತದೆ. ಸರಕಾರ ಎತ್ತಿನಹೊಳೆ ಯೋಜನೆಗೆ ಎಷ್ಟು ಅನುದಾನ ಕೊಡುತ್ತಿದೆಯೋ ಅಷ್ಟೇ ಅನುದಾನವನ್ನು ಪಶ್ಚಿಮವಾಹಿನಿ ಯೋಜನೆಗೂ ಕೊಡಿ, ನಮಗೆ ಕುಡಿಯುವ ನೀರಿನ ಅವಶ್ಯಕತೆ ಇದೆ ಎಂದರು.