Published
4 months agoon
By
Akkare News
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಉಪ್ಪಿನಂಗಡಿಯ ಪ್ಲೇಸ್ಮೆಂಟ್ ಸೆಲ್ , ಸಮಾಜಶಾಸ್ತ್ರ ವಿಚಾರ ವೇದಿಕೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಘಟಕ (IQAC) ಗಳ ಸಹಯೋಗದೊಂದಿಗೆ “ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಸರಿಯಾದ ದೃಷ್ಟಿಕೋನ”(Right Approach Towards Competitive Exams) ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಕಾಲೇಜಿನ ಸ್ನಾತಕೋತ್ತರ ವಿಭಾಗದ ಕಟ್ಟಡದಲ್ಲಿ ಆಯೋಜಿಸಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ ಎಸ್. ಅವರ ಅನುಪಸ್ಥಿತಿಯಲ್ಲಿ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯಾದ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಅಜಯ್ ಕುಮಾರ್, ಐ.ಆರ್.ಎಸ್ (ಪ್ರೊಬೇಷನರಿ ಅಸಿಸ್ಟೆಂಟ್ ಕಮಿಷನರ್, ಮಹಾರಾಷ್ಟ್ರ ಕೇಡರ್), ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕ್ರಮ, ಸಮಯ ನಿರ್ವಹಣೆ, ವಿಶ್ಲೇಷಣಾತ್ಮಕ ಹಾಗೂ ವಿಮರ್ಶಾತ್ಮಕ ಚಿಂತನೆಯನ್ನು ರೂಢಿಸಿಕೊಳ್ಳುವುದರ ಕುರಿತು ಅಮೂಲ್ಯ ಸಲಹೆಗಳನ್ನು ನೀಡಿದರು. ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಆತ್ಮವಿಶ್ವಾಸದಿಂದ ತಮ್ಮ ಗುರಿ ಸಾಧನೆಯತ್ತ ಹೆಜ್ಜೆ ಇಡುವಂತೆ ಪ್ರೇರಣೆ ನೀಡಿದರು.



ಕಾರ್ಯಕ್ರಮದಲ್ಲಿ IQAC ಸಂಯೋಜಕರಾದ ಡಾ. ಹರಿಪ್ರಸಾದ್ ಎಸ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಮಾಜಶಾಸ್ತ್ರ ವಿಚಾರ ವೇಧಿಕೆಯ ಸಂಚಾಲಕರು ಆದ ಶ್ರೀ ಮಹೇಶ ಜಿ. ಹಾಗೂ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರು ಹಾಗೂ ಪ್ಲೇಸ್ಮೆಂಟ್ ಸೆಲ್ ಸಂಯೋಜಕರಾದ ಡಾ. ನಂದೀಶ್ ವೈ.ಡಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಕೃಷ್ಣ .ಡಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ತೇಜಸ್ವಿ ಕುಮಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸಂಪ್ರೀತ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು. ಕಾರ್ಯಾಗಾರವು ವಿದ್ಯಾರ್ಥಿಗಳ ಪ್ರಶ್ನೋತ್ತರದೊಂದಿಗೆ ಮುಕ್ತಾಯಗೊಂಡಿತು. ವಿದ್ಯಾರ್ಥಿಗಳು ತಮ್ಮ ಕುತೂಹಲದ ಹಲವು ಪ್ರಶ್ನೆಗಳಿಗೆ ಸೂಕ್ತ ಸ್ಪಷ್ಟನೆಗಳನ್ನು ಪಡೆಯುವ ಮೂಲಕ ಕಾರ್ಯಾಗಾರವನ್ನು ಅರ್ಥಪೂರ್ಣವಾಗಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸರಿಯಾದ ದೃಷ್ಟಿಕೋನವನ್ನು ರೂಪಿಸಲು ಸಹಾಯಕವಾಯಿತು.




