Published
10 months agoon
By
Akkare News
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ವಿಚಾರವು ಸದ್ಯ ದೆಹಲಿ ಅಂಗಳದಲ್ಲಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಹೈಕಮಾಂಡ್ ಭೇಟಿಗಾಗಿ ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈಗಾಗಲೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ನಡುವೆ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ವಿಚಾರವಾಗಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುತ್ತೇನೆ. ಜನವರಿಯೊಳಗೆ 100 ಕಾಂಗ್ರೆಸ್ ಕಚೇರಿಗಳಿಗೆ ನಾನು ಶಂಕುಸ್ಥಾಪನೆ ಮಾಡಬೇಕಾಗಿದೆ. 70-80 ಕಚೇರಿಗಳ ನಿರ್ಮಾಣಕ್ಕೆ ಭೂಮಿ ಸಿದ್ಧವಾಗಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮಕ್ಕೆ ಬರಬೇಕು. ಅದಕ್ಕಾಗಿಯೇ ನಾನು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದೇನೆ’ ಎಂದಿದ್ದಾರೆ. ಇದರೊಂದಿಗೆ ತಮ್ಮ ರಾಜೀನಾಮೆ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
‘ಸಚಿವ ಸಂಪುಟ ಪುನರ್‌ರಚನೆ ವಿಚಾರವಾಗಿ ಯಾವುದೇ ಚರ್ಚೆ ಇಲ್ಲ, ಪ್ರಶ್ನೆ ಇಲ್ಲ, ಮತ್ತು ಯಾರೂ ಏನನ್ನೂ ಮಾಡಲು ಆತುರಪಡುತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಪಕ್ಷಕ್ಕೆ ಉತ್ತಮವಾದ ಯಾವುದೇ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ನಾವು 2028ರ ಚುನಾವಣೆಯ ಗುರಿಯನ್ನು ಹೊಂದಿದ್ದೇವೆ ಅಷ್ಟೇ’ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೊಡಲಿದ್ದಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅವರು, ‘ನನಗೆ ಮಾನಸಿಕ ಆರೋಗ್ಯ, ದೈಹಿಕ ಆರೋಗ್ಯ ಹಾಗೂ ರಾಜಕೀಯ ಆರೋಗ್ಯ ಎಲ್ಲವೂ ಸರಿಯಾಗಿದೆ. ನಾನು ಸದ್ಯ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಲು ಹೋಗುತ್ತಿದ್ದೇನೆ. ಡಿಸೆಂಬರ್‌ವೊಳಗೆ ಕಾಂಗ್ರೆಸ್ ಕಚೇರಿಗಳಿಗೆ ಭೂಮಿ ಪೂಜೆ ಮಾಡಬೇಕು. ಅದಕ್ಕೆ ನಾನು ದಿನಾಂಕ ಫಿಕ್ಸ್ ಮಾಡಬೇಕು ಎಂದಿದ್ದಾರೆ. ಇದೆಲ್ಲ ಕೆಲಸವೂ ನಾನೇ ಮಾಡಬೇಕು. ಹೀಗಿರುವಾಗ ನಾನೇಕೆ ರಾಜೀನಾಮೆ ಕೊಡಲಿ?’ ಎಂದಿದ್ದಾರೆ.