Connect with us

ಇತರ

ಭಾರೀ ಮಳೆಗೆ ಬೆಳೆ ಹಾನಿ; 2136 ಕೋಟಿ ರೂ.ಗಳ ಪರಿಹಾರಕ್ಕೆ ಮೋದಿ ಭೇಟಿಯಾದ ಸಿದ್ದರಾಮಯ್ಯ!

Published

on

ನವದೆಹಲಿ, ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ವರ್ಷ ಉಂಟಾದ ಭಾರಿ ಮಳೆಯಿಂದಾಗಿ ರಾಜ್ಯದ 14.5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 19 ಲಕ್ಷ ರೈತರಿಗೆ ನಷ್ಟ ಉಂಟಾಗಿದೆ. ಇದಲ್ಲದೇ ಸಾವಿರಾರ ಮನೆಗಳು, ರಸ್ತೆ ಹಾಗೂ ಶಾಲೆ ಗಳು ಹಾನಿಗೀಡಾಗಿದ್ದು ಎನ್.ಡಿ.ಆರ್ ಎಫ್ ವತಿಯಿಂದ ಪರಿಹಾರವನ್ನು ಕೋರಿ ಎರಡು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಇನ್ಪುಟ್ ಸಬ್ಸಿಡಿಯಲ್ಲಿನ ಕೊರತೆಗಳನ್ನು ನೀಗಿಸಲು ‘ರಕ್ಷಣೆ ಮತ್ತು ಪರಿಹಾರ’ ದಡಿ 614.9 ಕೋಟಿಗಳು ಹಾಗೂ ದಡಿ ಹಾನಿಗೊಳಗಾದ ಸಾರ್ವಜನಿಕ ಮೂಲಸೌಕರ್ಯಗಳ ಪುನರ್ವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ 1521.67 ಕೋಟಿಗಳ ಪರಿಹಾರ ನೀಡಲು ಮನವಿ ಪತ್ರದಲ್ಲಿ ಕೋರಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version