Published
4 months agoon
By
Akkare News
ಕರ್ನಾಟಕ ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರಿ e-challan ಮತ್ತು ಡಿ.ಎಸ್.ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50% ರಿಯಾಯಿತಿ ನೀಡಿರುವ ಕುರಿತು 20-11-2025.
ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ: ໖໖ 27 ໖໖ 2023 : 20-11-2025 , e-challan ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿರುತ್ತದೆ.


ಆದ್ದರಿಂದ ಸದರಿ ಆದೇಶದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿ ಕಳುಹಿಸುತ್ತಾ ಉಲ್ಲೇಖಿತ ಆದೇಶದಲ್ಲಿ ತಿಳಿಸಿದಂತೆ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ದಿನಾಂಕ: 21-11-2025 ರಿಂದ 12-12-2025 ರವರೆಗೆ ಕಾಲಾವಕಾಶ ನೀಡಿದ್ದು ಅದರಂತೆ ಸಾರ್ವಜನಿಕರಿಂದ ಬಾಕಿ ಇರುವ ಡಿ.ಎಸ್.ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50% ರಿಯಾಯಿತಿ ನೀಡಿ ದಂಡ ಮೊತ್ತವನ್ನು ಸಂಗ್ರಹಿಸಲು ಸೂಕ್ತ ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಲಾಗಿದೆ.







