Published
4 months agoon
By
Akkare News
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಲಿರುತ್ತದೆ. ಇದೀಗ ಹೊಸ ಪಡಿತರ ವಿತರಣೆ ವ್ಯವಸ್ಥೆ ಜಾರಿ ಕುರಿತು ಆಹಾರ ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ರದ್ದುಪಡಿಸುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ಮೂಲಕ ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಂಡಿದ್ದ ಅನರ್ಹರ ವಿರುದ್ಧ ಸಮರ ಸಾರಿದ್ದು, ಅವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುತ್ತಿದೆ. ಇದಕ್ಕೂ ಒಂದೆಜ್ಜೆ ಮುಂದಿಟ್ಟಿದ್ದು, ದಂಡಾಸ್ತ್ರದ ಬಗ್ಗೆಯೂ ಚಿಂತನೆ ನಡೆಸಿದೆ. ಈ ನಡುವೆಯೇ ಪಡಿತರ ಚೀಟಿದಾರರಿಗೆ ಇದೀಗ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬರಲಾಗಿತ್ತು. ಆದರೆ ಇದೀಗ ಕೊನೆಗೂ ಯಾವಾಗಿನಿಂದ ಇದನ್ನು ಜಾರಿಗೊಳಿಸಲಾಗುತ್ತದೆ ಎನ್ನುವ ಮಹತ್ವದ ಅಪ್ಡೇಟ್ ಸಿಕ್ಕಿದೆ. ಪಡಿತರ ಚೀಟಿದಾರರಿಗೆ ಮುಂದಿನ ವರ್ಷದಿಂದ ಹೊಸ ಪಡಿತರ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ಫೆಬ್ರವರಿಯಲ್ಲಿ ಇಂದಿರಾ ಕಿಟ್ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.


ಜೋಳದ ಖರೀದಿ ಬೆಲೆ ಹಾಗೂ ಇಂದಿರಾ ಕಿಟ್ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಇಂದಿರಾ ಗಾಂಧಿ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು. ಇನ್ನು ಇಂದಿರಾ ಆಹಾರ ಕಿಟ್‌ನಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಇರುತ್ತದೆ. ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಾಕಷ್ಟು ಜೋಳ ದೊರಕಿಲ್ಲದಿರುವದರ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಭಾಗದ ಮಂದಿ ಅಕ್ಕಿಗಿಂತ ಜೋಳವನ್ನೇ ಹೆಚ್ಚು ಬಳಕೆ ಮಾಡುತ್ತಾರೆ. ಜೋಳ ಉತ್ಪಾದನೆ ಹಾಗೂ ಶೇಖರಣೆ ಬಗ್ಗೆ ಸಮಗ್ರ ಯೋಜನೆಯ ಅಗತ್ಯವಿದೆ ಎಂದು ಹೇಳಿದರು.






