Published
3 months agoon
By
Akkare News
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಸಂಚಲನ ಸೃಷ್ಟಿಸುತ್ತಿವೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದರು. ಆದರೆ ಅಸಲಿಗೆ ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇನ್ನು ಸಿಎಂ ಬದಲಾವಣೆ ವಿಚಾರವಾಗಿ ಮಲ್ಲಿಕಾರ್ಜುನ್ ಖರ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ’ ಎನ್ನುವ ಮೂಲಕ ಮಲ್ಲಿಕಾರ್ಜುನ್ ಖರ್ಗೆ ಕುತೂಹಲ ಮೂಡಿಸಿದ್ದಾರೆ. ‘ಅದರ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಏನೇ ವಿಚಾರವಿದ್ದರೂ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಿನ ವಿದ್ಯಮಾನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ವಿಷಯ ಇಲ್ಲ. ಯಾವ ವಿಚಾರದಲ್ಲೂ ಏನಿಲ್ಲ’ಎಂದಿದ್ದಾರೆ.
ಹೈಕಮಾಂಡ್ ಕೈಯಲ್ಲಿ ಎಲ್ಲ ಇದೆ’ ‘ರಾಜ್ಯದಲ್ಲಿ ಸಿಎಂ ಹುದ್ದೆಯ ಕುರಿತಾದ ಊಹಾಪೋಹಗಳ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಒಂದು ರೀತಿ ಕುತೂಹಲ ಮೂಡಿಸಿದೆ. ಮಾಧ್ಯಮದವರು ಮೂರು ದಿನಗಳಿಂದ ನಿರಂತರವಾಗಿ ಇಲ್ಲಿಯೇ ಇದ್ದೀರಿ. ಯಾವುದೇ ಸಮಸ್ಯೆ ಇಲ್ಲದೆ, ನಾನು ಏನನ್ನಾದರೂ ಹೇಳಿದರೆ ಅದು ಒಳ್ಳೆಯದಲ್ಲ. ಇಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ನಾನು ಹೇಳಲು ಏನೂ ಇಲ್ಲ. ಏನೇ ಆಗಲಿ, ಹೈಕಮಾಂಡ್ ಅದನ್ನು ಮಾಡುತ್ತದೆ. ಆದ್ದರಿಂದ ಅದರ ಬಗ್ಗೆ ಹೆಚ್ಚು ಚಿಂತಿಸುವುದು ಸರಿಯಲ್ಲ’ ಎಂದಿದ್ದಾರೆ.
ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ಬಣದ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು. ಬಳಿಕ ಡಿಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದರು. ‘ನನ್ನ ಯಾವ ಬಣವೂ ಇಲ್ಲ, ನಾನು ಯಾರನ್ನೂ ಕಳಿಸಿಲ್ಲ. 140 ಶಾಸಕರೂ ನನ್ನ ಶಾಸಕರು. ಗುಂಪು ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ’ ಎಂದಿದ್ದರು.
ಮುಖ್ಯಮಂತ್ರಿಗಳು ಸಂಪುಟ ಪುನರ್‌ರಚನೆ ಮಾಡಲು ನಿರ್ಧರಿಸಿದರು. ಎಲ್ಲರೂ ಸಚಿವರಾಗಲು ಬಯಸುತ್ತಾರೆ. ಆದ್ದರಿಂದ ಅವರು ದೆಹಲಿಯಲ್ಲಿ ನಾಯಕರನ್ನು ಭೇಟಿಯಾಗುವುದು ಸಹಜ. ಅದು ಅವರ ಹಕ್ಕು. ನಾವು ಅವರನ್ನು ತಡೆದು ಬೇಡ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು 5 ವರ್ಷಗಳನ್ನು ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅವರಿಗೆ ಶುಭ ಹಾರೈಸುತ್ತೇನೆ. ನಾವೆಲ್ಲರೂ ಅವರೊಂದಿಗೆ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಾನು ಇಬ್ಬರೂ ಹೈಕಮಾಂಡ್‌ಗೆ ಬದ್ಧರಾಗಿರುತ್ತೇವೆ’ ಎಂದಿದ್ದರು.