Published
3 months agoon
By
Akkare News
ಕಲಬುರಗಿ: ಹಿರಿಯ ಐಎಎಸ್ (IAS) ಅಧಿಕಾರಿ ಮಹಾಂತೇಶ್ ಬೀಳಗಿ (51) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
: ಗೌನಳ್ಳಿ ಬಳಿ ಘೋರ ದುರಂತ!

ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಳ್ಳಿ ಸಮೀಪ ಈ ದುರಂತ ಸಂಭವಿಸಿದೆ.
ಮಹಾಂತೇಶ್ ಸೇರಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಮೊದಲು ದಾವಣಗೆರೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಬೆಸ್ಕಾಂನ ಎಂಡಿಯಾಗಿದ್ದರು. ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಕಾರು ಪಲ್ಟಿಯಾದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಮಣ್ಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬೀಳಗಿ ಅವರು ಅಸುನೀಗಿದ್ದಾರೆ.
ಇನ್ನು ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿ ಇತರ ಅಧಿಕಾರಿಗಳು ದೌಡಾಯಿಸಿದ್ದಾರೆ.






