Connect with us

ಇತರ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇನಾಯತ್ ಅಲಿಗೆ ಈಡಿ ಸಂಕಟ

Published

on

ಬೆಂಗಳೂರು/ ಮಂಗಳೂರು, ಡಿಸೆಂಬರ್ 07: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಈಡಿ ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು.
ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಕೆಶಿ ಆಪ್ತ ಇನಾಯತ್ ಅಲಿಗೂ EOW-ದಿಲ್ಲಿ ಪೊಲೀಸ್ ತನಿಖೆಗೆ ಹಾಜರಾಗುವಂತೆ ನೋಟಿಸ್ ನೋಟಿಸ್ ನೀಡಿದೆ.

ಮಾಹಿತಿಯ ಪ್ರಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಈಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಸತತವಾಗಿ ಇನಾಯತ್ ಅಲಿ ತನಿಖೆಗೊಳಪಟ್ಟಿದ್ದಾರೆ ಹಾಗೂ ಅದರ ಮುಂದುವರಿದ ಭಾಗವಾಗಿ ಇದೀಗ ದಿಲ್ಲಿ ಪೊಲೀಸರಿಂದ ವಿಚಾರಣೆಗೊಳಪಡುವಂತೆ ನೋಟಿಸ್ ಜಾರಿಯಾಗಿದೆ.
ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂದು ತಿಳಿದು ಬಂದಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version