Connect with us

ಅಪಘಾತ

ಗೋವಾ ಬೀಕರ ದುರಂತ ನೈಟ್ ಕ್ಲಬ್ ನಲ್ಲಿ ಅಗ್ನಿ ದುರಂತ 25 ಮಂದಿ ಸಜೀವ ದಹನ

Published

on

ಪಣಜಿ:  ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ಶನಿವಾರ ಮತ್ತು ರವಿವಾರದ ಮಧ್ಯರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅರ್ಪೋರಾದ ರೆಸ್ಟೋರೆಂಟ್-ಕಮ್-ಕ್ಲಬ್‌ನಲ್ಲಿ ದುರಂತ ಸಂಭವಿಸಿದೆ. ಬೆಳಗಿನ ಜಾವ 12.04 ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ಈಗ ನಿಯಂತ್ರಿಸಲಾಗಿದ್ದು ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ” ಎಂದು ಗೋವಾ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಜನಪ್ರಿಯ ಬೀಚ್‌ಗಳಲ್ಲಿ ಒಂದಾದ ಬಾಗಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಕ್ಲಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದು ರಾಜ್ಯ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿದೆ.

ನೈಟ್‌ಕ್ಲಬ್‌ನಲ್ಲಿ ಭಾರಿ ಬೆಂಕಿ ಹರಡುತ್ತಿರುವುದನ್ನು ವಿಡಿಯೋ ಗಳಲ್ಲಿ ಕಾಣಬಹುದಾಗಿದೆ.  ಜ್ವಾಲೆಗಳು ವೇಗವಾಗಿ ಹರಡಿ ಸಂಪೂರ್ಣವಾಗಿ ಆವರಿಸಿದೆ.

ತಡರಾತ್ರಿ ಸ್ಥಳಕ್ಕೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಬಲಿಯಾದವರಲ್ಲಿ ಹೆಚ್ಚಿನವರು ಅಡುಗೆ ಸಿಬಂದಿಯಾಗಿದ್ದು, ಅದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಮತ್ತು ಮೂರರಿಂದ ನಾಲ್ಕು ಪ್ರವಾಸಿಗರು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ನೈಟ್‌ಕ್ಲಬ್ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ. ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದರೂ ಕ್ಲಬ್ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಹಿಸಲು ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಸಾವಂತ್ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.  ಸಾವನ್ನಪ್ಪಿದ ಪ್ರತಿಯೊಬ್ಬ ವ್ಯಕ್ತಿಯ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಮತ್ತು ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ.  

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version