Published
3 months agoon
By
Akkare News
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಈ ಹರಾಜಿಗೂ ಮುನ್ನವೇ 10 ಆಟಗಾರರು ಬೇರೆ ಬೇರೆ ತಂಡಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅಂದರೆ ಐಪಿಎಲ್ ಮಿನಿ ಆಕ್ಷನ್ಗೂ ಮುನ್ನವೇ ಕೆಲ ಫ್ರಾಂಚೈಸಿಗಳು ಟ್ರೇಡಿಂಗ್ ಆಯ್ಕೆಗಳ ಮೂಲಕ ಕೆಲ ಆಟಗಾರರನ್ನು ಖರೀದಿಸಿದೆ. ಇನ್ನು ಕೆಲ ಫ್ರಾಂಚೈಸಿಗಳು ಟ್ರೇಡ್ ಆಯ್ಕೆಯೊಂದಿಗೆ ಸ್ವಾಪ್ ಡೀಲ್ ಮಾಡಿಕೊಂಡಿದೆ. ಹೀಗೆ ಹರಾಜಿಗೂ ಮುನ್ನ ಹೊಸ ತಂಡಗಳಿಗೆ ಎಂಟ್ರಿ ಕೊಟ್ಟಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ…
ಮಯಾಂಕ್ ಮಾರ್ಕಂಡೆ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿದ್ದ ಯುವ ಸ್ಪಿನ್ನರ್ ಮಯಾಂಕ್ ಮಾರ್ಕಂಡೆಯನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 30 ಲಕ್ಷ ರೂ. ಕ್ಯಾಶ್ ಡೀಲ್ನೊಂದಿಗೆ ತನ್ನದಾಗಿಸಿಕೊಂಡಿದೆ. ಅದರಂತೆ ಮುಂದಿನ ಸೀಸನ್ನಲ್ಲಿ ಮಯಾಂಕ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.
ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಮುಂದಿನ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ ಅವರನ್ನು ಸ್ವಾಪ್ ಡೀಲ್ ಮಾಡಿಕೊಳ್ಳುವ ಮೂಲಕ ಸಿಎಸ್ಕೆ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.
ನಿತೀಶ್ ರಾಣಾ: ಐಪಿಎಲ್ 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದಿದ್ದ ನಿತೀಶ್ ರಾಣಾ ಮುಂದಿನ ಸೀಸನ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 4.2 ಕೋಟಿ ರೂ. ನೀಡಿ ಆರ್ಆರ್ ತಂಡದಿಂದ ನಿತೀಶ್ ರಾಣಾ ಅವರನ್ನು ಖರೀದಿಸಿದೆ.
ಅರ್ಜುನ್ ತೆಂಡೂಲ್ಕರ್: ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬರುವ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 30 ಲಕ್ಷ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಟ್ರೇಡ್ ಮಾಡಿಕೊಂಡಿದೆ.
ಮೊಹಮ್ಮದ್ ಶಮಿ: ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ. ಎಸ್ಆರ್ಹೆಚ್ ಫ್ರಾಂಚೈಸಿಗೆ 10 ಕೋಟಿ ರೂ. ನೀಡಿ ಶಮಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿದೆ.
ಶಾದೂರ್ಲ್ ಠಾಕೂರ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ಎಲ್ಎಸ್ಜಿ ಫ್ರಾಂಚೈಸಿಗೆ 2 ಕೋಟಿ ರೂ. ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ.