Connect with us

ಇತರ

ಅಕ್ಷತಾ ಪೂಜಾರಿಗೆ ಕೂಡಲೇ ನ್ಯಾಯ ಒದಗಿಸಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯ

Published

on

ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ (ರಿ) ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಒತ್ತಾಯಿಸಿದ್ದಾರೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೊಲೀಸರು ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಯುವತಿ ದೂರು ಕೊಟ್ಟಾಗ ಠಾಣಾಧಿಕಾರಿಗಳು ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿರುವುದು ಎಷ್ಟು ಸರಿ? ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸ್ ದಾಖಲಿಸಿ ಯುವತಿಗೆ ನ್ಯಾಯ ಒದಗಿಸಬೇಕು. ಅಕ್ಷತಾ ಪೂಜಾರಿಯೊಂದಿಗೆ ಸಮಾಜ ಜೊತೆಯಾಗಿ ನಿಲ್ಲುತ್ತದೆ. ಇಂತಹ ಘಟನೆ ಪುನರಾವರ್ತನೆ ಆಗಬಾರದು. ಕಾನೂನು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡಬೇಕಾಗಿರುವುದು ಪೊಲೀಸರ ಕರ್ತವ್ಯ. ಒಂದು ವೇಳೆ ಸೂಕ್ತ ನ್ಯಾಯ ಸಿಗದಿದ್ದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಈ ಮೂಲಕ ಎಚ್ಚರಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement