Connect with us

ಇತರ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Published

on

ಬೆಳ್ತಂಗಡಿ: ರೌಡಿ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬರಿಗೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಗಡಿಪಾರು ಆದೇಶ ಜಾರಿಯಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ಮಹೇಶ್ ಶೆಟ್ಟಿ ತಿಮರೋಡಿ ಎಂಬಾತನನ್ನು ಈ ಹಿಂದಿನ ಆದೇಶದಂತೆ ಮತ್ತೆ ಪರಿಷೀಲನೆ ಮಾಡಿ ಗಡಿಪಾರು ಮಾಡಲಾಗಿದೆ.

ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಡಿಸೆಂಬರ್ 17ರಂದು ಗಡಿಪಾರು ಆದೇಶ ಹೊರಡಿಸಲಾಗಿದೆ. ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮದ್ಯ ಪ್ರವೇಶಿಸದಂತೆ ಸೂಚಿಸಲಾಗಿದೆ.

ಇದೇ ವೇಳೆ, ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸರಿಗೆ ಬಂದ ಹಿನ್ನೆಲೆಯಲ್ಲಿ ಡಿಸೆಂಬರ್ 18ರಂದು ಉಜಿರೆ ತಿಮರೋಡಿಯನ್ನು ಬಂಧಿಸಿ ಪೊಲೀಸ್ ಠಾಣೆಗೆ ಹಾಜರುಪಡಿಸಿ ನೋಟಿಸ್ ಜಾರಿ ಮಾಡಲಾಗಿದೆ. ಗಡಿಪಾರು ಅವಧಿಯಲ್ಲಿ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಇಲಾಖೆ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version