Published
3 months agoon
By
Akkare News
ಮಂಗಳೂರು:ಡಿಸೆಂಬರ್19: ಎರಡು ಗುಂಪುಗಳ ನಡುವೆ ಹೊಡೆದಾಟದ ಹಿನ್ನೆಲೆಯಲ್ಲಿ ಜಿಲ್ಲಾ ಕಾರಾಗೃಹದೊಳಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗೃಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.