Published
3 months agoon
By
Akkare News
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಮಾತ್ರ ವಾಹನ ಚಲಾವಣೆ ಮಾಡಬೇಕು ಎಂದು ಕಡಬ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.
ರಸ್ತೆ ಸುರಕ್ಷತೆ ದೃಷ್ಟಿಯಿಂದ ಹೆಲ್ಮೆಟ್ ಬಳಕೆ ಅತ್ಯಂತ ಅವಶ್ಯಕವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸಿ, ತಮ್ಮ ಹಾಗೂ ಇತರರ ಜೀವ ರಕ್ಷಣೆಗಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮನವಿ ಮಾಡಲಾಗಿದೆ.
ಠಾಣಾಧಿಕಾರಿ, ಕಡಬ ಪೊಲೀಸ್ ಠಾಣೆ