Published
3 months agoon
By
Akkare News
ಮಂಗಳೂರು, : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಸ್ವಾಯತ್ತ ಸಂಸ್ಥೆ ಇ.ಡಿ. ಯ ದುರುಪಯೋಗವನ್ನು ಖಂಡಿಸಿ ದ.ಕ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಸೋಮವಾರ ಪೊಲೀಸರು ತಡೆದು, ವಶಕ್ಕೆ ಪಡೆದರು.
ಪ್ರತಿಭಟನೆಯ ಬಳಿಕ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಹೊರಟು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸಿ ಪಿವಿಎಸ್ ಬಳಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಮಲ್ಲಿಕಟ್ಟೆ ಸರ್ಕಲ್ ಬಳಿ ತಡೆದರು. ಪ್ರತಿಭಟನೆ ನಡೆಸಿದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಪ್ರಮುಖರಾದ ಎಂ.ಎ.ಗಪೂರ್, ಇನಾಯತ್ ಅಲಿ, ಸದಾಶಿವ ಉಳ್ಳಾಲ, ಕೆ.ಅಶ್ರಫ್, ಶಾಲೆಟ್ ಪಿಂಟೊ, ಅಪ್ಪಿ, ಅಬ್ದುಲ್ ರವೂಫ್, ಸುರೇಶ್ ಬಳ್ಳಾಲ್, ಎಂ.ಎಸ್ ಮುಹಮ್ಮದ್, ಶಶೀಧರ ಹೆಗ್ಡೆ, ಎಸ್ ಅಪ್ಪಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.