Published
2 months agoon
By
Akkare News
ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ.
ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.