Connect with us

ಅಪಘಾತ

ಚಿತ್ರದುರ್ಗ ಬಳಿ ಹೊತ್ತಿ ಉರಿದ ಖಾಸಗಿ ಬಸ್‌, 17ಕ್ಕೂ ಹೆಚ್ಚು ಮಂದಿ ಸಜೀವ ದಹನ

Published

on

ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.

ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ.

ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement