Published
2 months agoon
By
Akkare News
ಬೆಂಗಳೂರು: 2028ರಲ್ಲಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿಜೀ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು. ಕಾಂಗ್ರೆಸ್ ಪಕ್ಷದ ಅಪಪ್ರಚಾರಗಳ ನಡುವೆಯೂ ಬಿಜೆಪಿ ನೇತೃತ್ವದ ಕೇಂದ್ರದ ಎನ್‍ಡಿಎ ಸರಕಾರವು ಭ್ರಷ್ಟಾಚಾರರಹಿತ ಆಡಳಿತವನ್ನು ನರೇಂದ್ರ ಮೋದಿಯವರು ನೀಡುತ್ತಿದ್ದಾರೆ. ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ರಾಜ್ಯದ ಪಟ್ಟಣ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದರು. ಇವಿಎಂ ಇರಲಿ, ಬ್ಯಾಲೆಟ್ ಇರಲಿ ಕಾಂಗ್ರೆಸ್ಸಿನ ಹಣೆಬರಹ ಬದಲಾಗಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಅವರು ಹೇಳಿದರು.
ಅಟಲ್ ಜೀ, ಲಾಲ್ ಕೃಷ್ಣ ಅಡ್ವಾಣಿ ಜೀ ಅವರಂಥ ಶ್ರೇಷ್ಠರ ನಾಯಕತ್ವ ನಮಗೆ ಸಿಕ್ಕಿದೆ. ಮೋದಿ , ಅಮಿತ್ ಶಾ , ನಡ್ಡಾ ಅವರ ನೇತೃತ್ವದಲ್ಲಿ ಬಿಜೆಪಿ ದಾಪುಗಾಲು ಹಾಕುತ್ತಿದೆ. ಪಶ್ಚಿಮ ಬಂಗಾಲದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿನವರು ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎನ್ನುತ್ತಾರೆ. ವಾಜಪೇಯಿ, ಮೋದಿಜೀ ಅಥವಾ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಯಾರು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಾರೋ ಅಂಥ ದೇಶದ್ರೋಹಿಗಳನ್ನು ಬಿಜೆಪಿ ವಿರೋಧಿಸುತ್ತದೆ ಎಂದು ತಿಳಿಸಿದರು.