Published
2 months agoon
By
Akkare News

ಈ ಕುರಿತು ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಮಾಧ್ಯಮಗಳ ಜೊತೆಗೆ ಹೆಚ್ ಡಿ ದೇವೇಗೌಡ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿಯುತ್ತದೆ. ಆದರೆ ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ನರೇಂದ್ರ ಮೋದಿ ಅವರು, ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಎಂದು ಹೆಚ್ ಡಿ ದೇವೇಗೌಡ ಅವರು ಹೇಳಿದರು.

ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಚೆನ್ನಾಗಿದೆ. ನರೇಂದ್ರ ಮೋದಿ ಅವರು ಹಾಗೂ ಅಮಿತ್ ಶಾ ಅವರೊಂದಿಗೆ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ. ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷರು ನೀಡಿರುವ ಹೇಳಿಕೆ ತಪ್ಪು ಎಂದು ನಾನು ಹೇಳಲಾರೆ ಎಂದು ದೇವೇಗೌಡರು ಹೇಳಿದರು.


ಕ್ಷದ ಸಂಘಟನೆಯ ಬಗ್ಗೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಜತೆ ಮಾತನಾಡಿದ್ದೇನೆ. ಹಾಸನದಲ್ಲಿ ಜನವರಿ 23ರಂದು, ಬೆಂಗಳೂರಿನಲ್ಲಿ ಜನವರಿ 18ರಂದು ಸಭೆಗಳನ್ನು ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ನಾವು ಎನ್‌ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇವೆ. ಹಾಗೆಯೇ; ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್‌ಗೆ ಮತ್ತು 3 ಸ್ಥಾನ ಬಿಜೆಪಿಗೆ ಹಂಚಿಕೆಯಾಗುವ ಬಗ್ಗೆ ಪ್ರಾಥಮಿಕ ಮಟ್ಟದಲ್ಲಿ ಚರ್ಚೆ ಆಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಹೇಳಿದರು.

ಬೆಂಗಳೂರು ನಗರದಲ್ಲಿಯೂ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಸುಮ್ಮನೆ ಕೂರುವುದು ನನಗೆ ಇಷ್ಟವಿಲ್ಲ. ಹೀಗಾಗಿ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ತೊಡಗಿದ್ದೇನೆ. ಎಲ್ಲಿಗೆ ಕರೆದರೂ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹೇಳಿದರು.









